ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ. 18 ದೇಶಗಳು ಮತ್ತು 2,000ಕ್ಕೂ ಹೆಚ್ಚು ಹೂಡಿಕೆದಾರರು ಭಾಗವಹಿಸಲಿದ್ದಾರೆ.
ಫೆ.12 ಮತ್ತು 13ರಂದು ಇಡೀ ಎರಡು ದಿನ ಸಮಾವೇಶದಲ್ಲಿ ಅತ್ಯಂತ ಗಂಭೀರ ಚಟುವಟಿಕೆಗಳು ನಡೆಯಲಿವೆ. ಹೀಗಾಗಿ 11ರಂದು ಸಂಜೆ 4 ಗಂಟೆಗೇ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಈಗಾಗಲೇ 2,000ಕ್ಕೂ ಹೆಚ್ಚು ಹೂಡಿಕೆದಾರರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿದ್ದಾರೆ. ಸಮಾವೇಶದಲ್ಲಿ 18 ದೇಶಗಳು ಪಾಲ್ಗೊಳ್ಳುತ್ತಿದ್ದು, ಈ ಪೈಕಿ 9 ದೇಶಗಳು ಪ್ರತ್ಯೇಕ ಪೆವಿಲಿಯನ್ ಹೊಂದಿರಲಿವೆ. ಈ ಸಂದರ್ಭದಲ್ಲಿ 60ಕ್ಕೂ ಹೆಚ್ಚು ಉದ್ಯಮ ಪರಿಣತರು ಗೋಷ್ಠಿಗಳಲ್ಲಿ ಮಾತನಾಡಲಿದ್ದಾರೆ. ಸರಕಾರವು ರಾಜ್ಯದಲ್ಲಿ ಹೂಡಿಕೆಗೆ ಇರುವ ಪ್ರಶಸ್ತ ಅವಕಾಶಗಳನ್ನು, ಉದ್ಯಮಸ್ನೇಹಿ ನೀತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಹೂಡಿಕೆದಾರರಿಗೆ ಮನವರಿಕೆ ಮಾಡಿಕೊಡಲಿದೆ.
ಜಾಗತಿಕ ಹೂಡಿಕೆದಾರರ ಸಮಾವೇಶವು ‘ಪ್ರಗತಿಯ ಮರುಕಲ್ಪನೆ’ ಎನ್ನುವ ಪ್ರಧಾನ ಥೀಮ್ ಒಳಗೊಂಡಿದ್ದು, ತಂತ್ರಜ್ಞಾನ-ಚಾಲಿತ, ಪರಿಸರಸ್ನೇಹಿ, ಒಳಗೊಳ್ಳುವಿಕೆ ಮತ್ತು ಕ್ಷಮತೆ (Tech-driven, Green, Inclusive & Resilient) ಎನ್ನುವ ನಾಲ್ಕು ಉಪಆಶಯಗಳನ್ನು ಹೊಂದಿದೆ. ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿನ ಕೆಲವು ಅತ್ಯುತ್ತಮ ಅಂಶಗಳನ್ನೂ ಇಲ್ಲಿ ಅಳವಡಿಸಿಕೊಂಡಿದ್ದೇವೆ. ಅಂಕಿತ ಹಾಕುವ ಒಡಂಬಡಿಕೆಗಳ ಪೈಕಿ ಶೇಕಡ 70-80ರಷ್ಟಾದರೂ ನಿಜವಾದ ಹೂಡಿಕೆಯಾಗಿ ಪರಿವರ್ತನೆಯಾಗಬೇಕು ಎನ್ನುವುದು ಸರಕಾರದ ಗುರಿಯಾಗಿದೆ.
ಬಹುತೇಕ ಜಾಗತಿಕ ಮಟ್ಟದ ಕಂಪನಿಗಳೆಲ್ಲವೂ ಬೆಂಗಳೂರಿನಲ್ಲಿ ಆರ್ & ಡಿ ಕೇಂದ್ರಗಳನ್ನು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ) ಹೊಂದಿವೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲೇ ಉತ್ಪಾದನೆಯೂ ಆಗುವಂತೆ ನೋಡಿಕೊಳ್ಳಲು ಸರಕಾರ ಉಪಕ್ರಮಗಳನ್ನು ತೆಗೆದುಕೊಳ್ಳಲಿದೆ.
10 ಲಕ್ಷ ಕೋಟಿ ರೂ. ಹೂಡಿಕೆ ಗುರಿ ಜಾಗತಿಕ ಹೂಡಿಕೆದಾರರ ಸಮಾವೇಶ
10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ. 18 ದೇಶಗಳು ಮತ್ತು 2,000ಕ್ಕೂ ಹೆಚ್ಚು ಹೂಡಿಕೆದಾರರು ಭಾಗವಹಿಸಲಿದ್ದಾರೆ