ಗೃಹ ಆರೋಗ್ಯ ಯೋಜನೆ ಮೂಲಕ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡುವ ಜೊತೆ ಜೊತೆಗೆ ಇದೀಗ ನಮ್ಮ ಆರೋಗ್ಯ ಇಲಾಖೆಯು ಸಂಚಾರಿ ಆರೋಗ್ಯ ಘಟಕಗಳ ಮೂಲಕ ಸುಮಾರು 15.97 ಕೋಟಿ ರೂಪಾಯಿ ವೆಚ್ಚದಲ್ಲಿ ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಮುಂದಾಗಿದೆ.
ದುರ್ಗಮ ಮತ್ತು ಸಂಪರ್ಕ ರಹಿತ ಪ್ರದೇಶಗಳು, ಸಂಕಷ್ಟದಲ್ಲಿರುವ ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳು (ಪಿವಿಟಿಜಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಆರೋಗ್ಯ ಸೇವೆಗಳನ್ನು ಅವರ ಮನೆಯ ಬಾಗಿಲಲ್ಲೇ ನೀಡುವ ಉದ್ದೇಶದಿಂದ 82 ಸಂಚಾರಿ ಆರೋಗ್ಯ ಘಟಕಗಳು ಕಾರ್ಯಾಚರಣೆ ನಡೆಸಲಿವೆ.
Detailed interview of Karnataka health minister Dinesh Gundu Rao in Vande Karnataka Independence Day issue
