ಮಹಿಳೆಯ ದೇಹ ರಚನೆಯ ಬಗ್ಗೆ ಪ್ರತಿಕ್ರಿಯಿಸುವುದು ಲೈಂಗಿಕ ಕಿರುಕುಳ
ಮಹಿಳೆಯ ದೇಹ ರಚನೆ ಬಗ್ಗೆ ಪ್ರತಿಕ್ರಿಯೆಸುವುದು ಲೈಂಗಿಕ ಬಣ್ಣದ ಟೀಕೆಯಾಗಿದೆ, ಇದು ಲೈಂಗಿಕ ಕಿರುಕುಳದ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಸಂಸ್ಥೆಯೊಂದರ ಮಹಿಳಾ ಸಿಬ್ಬಂದಿಯೊಬ್ಬರು ಸಲ್ಲಿಸಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಕೇರಳ ರಾಜ್ಯ ವಿದ್ಯುಚ್ಛಕ್ತಿ ಮಂಡಳಿ (ಕೆಎಸ್ಇಬಿ) ಮಾಜಿ ಉದ್ಯೋಗಿಯೊಬ್ಬರು ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಎ. ಬದರುದ್ದೀನ್ ಅವರು ಈ ತೀರ್ಪು ನೀಡಿದ್ದಾರೆ. ಆರೋಪಿಗಳು 2013 ರಿಂದ ತನ್ನ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಮತ್ತು ನಂತರ, […]