ಕನ್ನಡ ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ
ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ. ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅವರ ಸಾವಿಗೆ ಅನೇಕರು […]
